ನಾನೇಕೆ ರಾಜೀನಾಮೆ ಕೊಡಬೇಕು? ರಾಜೀನಾಮೆ ಕೊಡಬೇಕಾದ ಸನ್ನಿವೇಶ ನನಗೆ ಇನ್ನೂ ಉದ್ಭವವಾಗಿಲ್ಲ : ಹೆಚ್.ಡಿ ಕುಮಾರಸ್ವಾಮಿ

291
firstsuddi

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರು ಮೈತ್ರಿ ಸರ್ಕಾರ ತನ್ನ ಸಂಖ್ಯಾಬಲವನ್ನು ಕಳೆದುಕೊಂಡಿದ್ದು, ಕೂಡಲೇ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಾನೇಕೆ ರಾಜೀನಾಮೆ ನೀಡಬೇಕು? ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ 18 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗಾ ಯಡಿಯೂರಪ್ಪ ಅವರು ರಾಜೀನಾಮೆಯನ್ನು ಕೊಟ್ರಾ? ಈಗಾ ನಾನೇಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡಬೇಕಾದ ಸನ್ನಿವೇಶ ನನಗೆ ಇನ್ನೂ ಉದ್ಭವವಾಗಿಲ್ಲ ಎಂದು ಹೇಳಿದ್ದಾರೆ.