ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ಮೇಲೆ ಸಾಮೂಹಿಕ ಅತ್ಯಾಚಾರ…

65
firstsuddi

ಭುವನೇಶ್ವರ್: ಸಹೋದರಿಯನ್ನು ಪಾಪಿ ಸಹೋದರನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈದಿರುವ ಪೈಶಾಚಿಕ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ನವೆಂಬರ್ 3 ರಂದು ಚಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ, ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿದ ನಂತರ ಕೊಲೆ ಹಿಂದಿನ ಕಾರಣ ಬಯಲಾಗಿದೆ. ಪ್ರಸ್ತುತ ಪೊಲೀಸರು ವ್ಯಕ್ತಿ ಮತ್ತು ಅವನ ಸ್ನೇಹಿತರನ್ನು ಶನಿವಾರ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿ ತನ್ನ ನಾಲ್ಕು ಮಂದಿ ಸ್ನೇಹಿತರೊಂದಿಗೆ ಸೇರಿ ತಂಗಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ.

ಅದರಂತೆ ಆತನ ಸಹೋದರಿ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಸಮೀಪದ ಕಾಡಿಗೆ ತೆರಳಿದ್ದಳು. ಅವಳ ಅಣ್ಣನೂ ತನ್ನ ಹಸುಗಳೊಂದಿಗೆ ತೆರಳಿದ್ದ. ಈ ವೇಳೆ ಆತ ತನ್ನ ನಾಲ್ವರು ಸ್ನೇಹಿತರನ್ನು ಕಾಡಿಗೆ ಕರೆಸಿಕೊಂಡು ಮದ್ಯಪಾನ ಮಾಡಿಸಿದ್ದಾನೆ. ಕುಡಿದ ಅಮಲಿನಲ್ಲಿದ್ದ ನಾಲ್ವರು ಸರದಿಯಂತೆ ಆಕೆಯ ಮೇಲೆ ನಾಲ್ಕೂ ಜನ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಕತ್ತು ಹಿಸುಕಿ ಕೊಲೆ ಮಾಡಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಹತ್ಯೆ ಬಳಿಕ ಆರೋಪಿ ತನ್ನ ಮೇಲೆ ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ನವೆಂಬರ್ 6 ರಂದು ಸಹೋದರಿ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಚಾಕಪಾಡ್ ಪೊಲೀಸ್ ಠಾಣೆ ಪೊಲೀಸರು ಸುತ್ತಮುತ್ತಲ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದು, ಈ ವೇಳೆ ನವೆಂಬರ್ 7 ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆದ ಪೊಲೀಸರು ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಮಹಿಳೆ ಸಾವಿಗೂ ಮುನ್ನ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವಿಚಾರ ಬಹಿರಂಗವಾಗಿದೆ. ಅನುಮಾನದ ಮೇಲೆ ಆಕೆಯ ಸಹೋದರನನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ ಇಡೀ ಪ್ರಕರಣ ಬಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.