ನಾಳೆ ಕರ್ನಾಟಕ ಬಂದ್: ಚಿತ್ರರಂಗದ ಪ್ರತಿಭಟನೆಗೆ ನಟ ಶಿವರಾಜ್​ಕುಮಾರ್ ನೇತೃತ್ವ…

67
firstsuddi

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿ ನಾಳೆ ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್​​ಗೆ ಬೆಂಬಲ ನೀಡಿವೆ. ಸ್ಯಾಂಡಲ್​ವುಡ್ ಕೂಡ ಬಂದ್​​ಗೆ ಬೆಂಬಲಸಿದೆ. ನಾಳೆ ನಟ ಶಿವರಾಜ್​ಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.

ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಈ ಮನವಿ ಯಶಸ್ವಿ ಆಗಿದೆ.

ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಧ್ರುವ ಸರ್ಜಾ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.