ನಾಳೆ ನಟ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ.

81
firstsuddi

ಬೆಂಗಳೂರು : ನಟ ಪುನೀತ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪುನೀತ್ ಅವರ ಮಗಳು ಧೃತಿ ಅಮೆರಿಕದಿಂದ ದೆಹಲಿ ತಲುಪಿದ್ದು, ಅಲ್ಲಿಂದ ಬೆಂಗಳೂರು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಅವರು 5:30 ಅಥವಾ 6 ಗಂಟೆಗೆ ಬರುವ ಸಾಧ್ಯತೆ ಇದೆ. 6 ಗಂಟೆಯ ನಂತರ ಕತ್ತಲಾದ ಮೇಲೆ ಸಣ್ಣಜಾಗದಲ್ಲಿ ಅಂತ್ಯಕ್ರಿಯೆ ಮಾಡುವುದು ಕಷ್ಟ. ಹೀಗಾಗಿ ಪುನೀತ್ ಅವರ ಕುಟುಂಬದ ಜೊತೆಗೆ ಚರ್ಚೆ ಮಾಡಿ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ. ನಾಳೆ ಬೆಳಗಿನ ಜಾವದವರೆಗೂ ಅಭಿಮಾನಿಗಳಿಗೆ ದರ್ಶನ ಮಾಡಲು ಅನುಕೂಲ ಮಾಡಲಾಗುವುದು. ಎಲ್ಲರೂ ಶಾಂತವಾಗಿ ಸಾಲಿನಲ್ಲಿ ಬಂದು ದರ್ಶನ ಪಡೆಯಿರಿ ಎಂದು ಮನವಿ ಮಾಡಿದರು.