ಮಂಡ್ಯ : ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಕ್ಕರೆ ನಾಡು ಮಂಡ್ಯಗೆ ಆಗಮಿಸುತ್ತಿರುವ ಹಿನ್ನೆಲೆ ಸ್ಥಳೀಯ ಬಿಜೆಪಿ ನಾಯಕರು ಫ್ಲೆಕ್ಸ್ ಹಾಕಿ ಅಮಿತ್ ಶಾ ಅವರಿಗೆ ಸ್ವಾಗತ ಕೋರಿರುವ ಫ್ಲೆಕ್ಸ್ ಗಳು ರಸ್ತೆ ಇಕ್ಕೆಲಗಳಲ್ಲಿ ಕಾಣಿಸುತ್ತಿವೆ. ಬಿಜೆಪಿ ಫ್ಲೆಕ್ಸ್ ಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ.
ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ.
ಇನ್ನೂ ಈ ಫ್ಲೆಕ್ಸ್ ಬಗ್ಗೆ ಸಚ್ಚಿದಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರ ಅನುಮತಿ ಪಡೆದು ಫೋಟೋ ಬಳಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.










