ಬೆಂಗಳೂರು : ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನಾಳೆ ಮಧ್ಯಾಹ್ನ 12.30ಕ್ಕೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ಹಾಗೂ kseeb.Karnataka.gov.in ನಲ್ಲೂ ವೀಕ್ಷಿಸಬಹುದು.
ಈ ಬಾರಿ ಪರೀಕ್ಷೆಗೆ ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults— B.C Nagesh (@BCNagesh_bjp) May 18, 2022










