ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿಪಿನ್ ರಾವತ್ ಅಂತ್ಯಕ್ರಿಯೆ…

65
firstsuddi

ನವದೆಹಲಿ : ತಮಿಳುನಾಡಿನ ಕುನೂರಿನಲ್ಲಿ ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ನಲ್ಲಿ 13 ಮಂದಿ ಹುತಾತ್ಮರಾಗಿದ್ದಾರೆ. ಇದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಪಾರ್ಥಿವ ಶರೀರ ಇಂದು ವಿಶೇಷ ಸೇನಾ ವಿಮಾನದಲ್ಲಿ ಬರಲಿವೆ. ಇದಾದ ಬಳಿ ಎಲ್ಲರ ಮೃತದೇಹ ಆಯಾ ರಾಜ್ಯಗಳಿಗೆ ರವಾನೆಯಾಗಲಿವೆ. ಇನ್ನು ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮೃತದೇಹವನ್ನ ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದಾದ ಬಳಿಕ ಬಳಿಕ ಕಾಮ್ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.