ದಾವಣಗೆರೆ: ಎಲ್.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ ಕೊಡಲಿ ಬಿಡಿ, ಪಾಪ ಬೇಡ ಎಂದವರು ಯಾರು? ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಭಾಗಿಯಾಗಿದ್ದಾರೆ. ಇದಕ್ಕೂ ಮುನ್ನ, ಈಶ್ವರಾನಂದಪುರಿ ಸ್ವಾಮೀಜಿಗೆ ಗರ್ಭಗುಡಿ ಪ್ರವೇಶ ನಿಷೇಧ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗೆ ಗೊತ್ತಿಲ್ಲದಿರುವುದನ್ನ ಹೇಗೆ ಹೇಳಲಿ ಎಂದು ಪ್ರಶ್ನಿಸಿದರು.










