ನಿಂತಿದ್ದ ಟ್ರಕ್ ಗೆ ಬೊಲೆರೊ ಕಾರು ಡಿಕ್ಕಿ-14 ಮಂದಿ ಸ್ಥಳದಲ್ಲೇ ಸಾವು…

178
firstsuddi

ಉತ್ತರ ಪ್ರದೇಶ : ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬೊಲೆರೊ ಕಾರು ಡಿಕ್ಕಿ ಹೊಡೆದು 14 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪ್ರಯಾಗ್ ರಾಜ್-ಲಕ್ನೋ ಹೆದ್ದಾರಿಯ ದೆಶ್ರಾಜ್ ಇನಾರಾ ಗ್ರಾಮದಲ್ಲಿ ನಡೆದಿದೆ. ಮೃತರು ತಮ್ಮ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕಳೆದ ರಾತ್ರಿ 11:45ರ ಸುಮಾರಿಗೆ ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿ ಇದ್ದ 14 ಮಂದಿಯೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಗ್ಯಾಸ್ ಕಟ್ಟರ್ ಸಹಾಯದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆಯ ವಿಷಯ ತಿಳಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಷಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.