ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು…

184
firstsuddi

ಮಂಡ್ಯ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ. ಜಯದೀಪ್(29), ಪತ್ನಿ ಜ್ಞಾನತೀರ್ಥ(26), ಕಿರಣ್ (30), ಪತ್ನಿ ಜಾನ್ಸಿ (27) ಮೃತ ದುರ್ಧೈವಿಗಳು. ಮೃತರು ಕೇರಳ ಮೂಲದವರು ಎಂದು ತಿಳಿದು ಬಂದಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆ ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.