ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿದ್ದವು. ಬಳಿಕ ಇನ್ನು ಕೆಲವೇ ದಿನಗಳಲ್ಲಿ ತನ್ನ ಮದುವೆ ಬಗ್ಗೆ ತಿಳಿಸುವುದಾಗಿ ಸ್ವತಃ ನಿಖಿಲ್ ಕುಮಾರಸ್ವಾಮಿ ಅವರೇ ಹೇಳಿಕೊಂಡಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಫಿಕ್ಸ್ ಆಗಿದ್ದು, ಕಾಂಗ್ರೆಸ್ ಶಾಸಕರ ಅಣ್ಣನ ಮೊಮ್ಮಗಳನ್ನು ನಿಖಿಲ್ ಕುಮಾರಸ್ವಾಮಿ ಮದುವೆಯಾಗಲಿದ್ದಾರೆ. ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮಗಳು ರೇವತಿ ಅವರನ್ನು ವಿವಾಹವಾಗಲಿದ್ದಾರೆ. ರೇವತಿ ಅವರು ಎಂಸಿಎ ಪದವೀಧರೆಯಾಗಿದ್ದು, ಮೇ ತಿಂಗಳ 17 ಮತ್ತು 18 ರಂದು ಇಬ್ಬರ ವಿವಾಹವಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಕುಟುಂಬ ನಿನ್ನೆ ಬೆಂಗಳೂರಿನಲ್ಲಿರುವ ವಧುವಿನ ಮನೆಗೆ ತೆರಳಿ ಮದುವೆ ಮಾತುಕತೆ ನಡೆಸಿ ಬಂದಿದ್ದಾರೆ ಎನ್ನಲಾಗಿದೆ.










