ನವದೆಹಲಿ: ನಿತೀಶ್ ಕುಮಾರ್ ಬಿಜೆಪಿ ತೊರೆದ ಬಳಿಕ ಒಂದಿಲ್ಲೊಂದು ಸಂಕಷ್ಟ ಎದುರಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮಣಿಪುರದಲ್ಲಿ ಜೆಡಿಯು ಪಕ್ಷದ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ದಮನ್ ಮತ್ತು ದಿಯುನಲ್ಲಿ ಜೆಡಿಯುನ 17 ಜಿಲ್ಲಾ ಪಂಚಾಯತ್ ಸದಸ್ಯರಲ್ಲಿ 15 ಸದಸ್ಯರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿ ಖುದ್ದಾಗಿ ಟ್ವೀಟ್ ಮಾಡಿದ್ದು, ಫೋಟೋ ಹಂಚಿಕೊಂಡಿದೆ. ಕೆಲವು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಜೆಡಿಯು ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು. ಇದಾದ ಬಳಿಕ ಮಣಿಪುರದ ಜೆಡಿಯುನ 7 ಶಾಸಕರ ಪೈಕಿ 5 ಮಂದಿ ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಮುಂದಿನ ಕೆಲ ದಿನಗಳಲ್ಲಿ ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಜೊತೆಗೆ 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡಿರುವ ಬಿಜೆಪಿ ಹೈಕಮಾಂಡ್ 15 ರಾಜ್ಯಗಳಿಗೆ ಹೊಸ ಉಸ್ತುವಾರಿಗಳನ್ನು ನೇಮಕ ಮಾಡಿದೆ.










