ನಿನ್ನೆ ನನಗೆ ಅತ್ಯಂತ ಭಾವನಾತ್ಮಕ ದಿನವಾಗಿತ್ತು : ಪ್ರಧಾನಿ ಮೋದಿ.

84
firstsuddi

ನವದೆಹಲಿ : ನಿನ್ನೆ ನನಗೆ ಅತ್ಯಂತ ಭಾವನಾತ್ಮಕ ದಿನವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಇಂದು ಗೋವಾದ ಆರೋಗ್ಯ ಕಾರ್ಯಕರ್ತರು ಹಾಗೂ ಕೊರೊನಾ ಲಸಿಕೆ ಪಡೆದ ಫಲಾನುಭವಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದಾರೆ. ಈ ವೇಳೆ ಮೋದಿ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದರು.

ನಿಮ್ಮ ಪ್ರಯತ್ನದಿಂದ ಭಾರತವು ಒಂದೇ ದಿನದಲ್ಲಿ 2.5 ಕೋಟಿ ಜನರಿಗೆ ಲಸಿಕೆ ಹಾಕುವ ದಾಖಲೆಯನ್ನು ಮಾಡಿದೆ. ಪ್ರತಿ ಸೆಕೆಂಡಿಗೆ 425ಕ್ಕೂ ಹೆಚ್ಚು ಜನರಂತೆ, ಪ್ರತಿ ನಿಮಿಷಕ್ಕೆ 26,000 ಮಂದಿಗೆ, ಪ್ರತಿ ಗಂಟೆಗೆ 15 ಲಕ್ಷಕ್ಕೂ ಹೆಚ್ಚು ಜನರಿಗೆ ನಿನ್ನೆ ಲಸಿಕೆ ನೀಡಲಾಗಿದೆ. ಸಮೃದ್ಧ ಮತ್ತು ಶಕ್ತಿಶಾಲಿ ಎಂದು ಪರಿಗಣಿಸಲ್ಪಟ್ಟ ದೇಶಗಳು ಸಹ ಇದನ್ನು ಮಾಡಲು ಸಾಧ್ಯವಾಗಲಿಲ್ಲ ಎಂದರು.

ಜನ್ಮದಿನಾಚರಣೆ ಕುರಿತು ಮಾತನಾಡಿದ ಮೋದಿ, ಜನ್ಮದಿನಗಳು ಬರುತ್ತವೆ, ಹೋಗುತ್ತವೆ. ಆದರೆ ನಾನು ಇದರಿಂದ ದೂರ ಉಳಿದಿದ್ದೇನೆ. ಆದರೆ ನಿನ್ನೆ ನನಗೆ ಅತ್ಯಂತ ಭಾವನಾತ್ಮಕ ದಿನವಾಗಿತ್ತು. ನಿಮ್ಮೆಲ್ಲರ ಪ್ರಯತ್ನದಿಂದ ನನಗೆ ಇದು ಅತ್ಯಂತ ವಿಶೇಷವಾದ ದಿನವಾಯಿತು ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು.