ನಿಯಂತ್ರಣ ತಪ್ಪಿ ಕಾರಿನ ಮೇಲೆ ಕಬ್ಬು ತುಂಬಿದ್ದ ಲಾರಿ ಪಲ್ಟಿ- ಮೂವರು ಸಾವು…

45
firstsuddi

ಚಾಮರಾಜನಗರ: ಕಬ್ಬು ತುಂಬಿದ ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಅಸುನೀಗಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ದಿಂಬಂ ಘಾಟ್​ನಲ್ಲಿ ನಡೆದಿದೆ.

ತಾಳವಾಡಿಯಿಂದ ಸತ್ಯಮಂಗಲಂನತ್ತ ಕಬ್ಬು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದಿಂಬಂನ 27ನೇ ತಿರುವಿನಲ್ಲಿ ಅಧಿಕ ಭಾರ ಹೊಂದಿದ್ದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಐವರಲ್ಲಿ ಮೂವರು ಅಸುನೀಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸತ್ಯಮಂಗಲಂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ತಮಿಳುನಾಡಿನ ಆಸನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಅಪಘಾತದಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.