ನವದೆಹಲಿ : 2012ರಲ್ಲಿ ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅತ್ಯಾಚಾರಿಗಳಿಗೆ ಮಾರ್ಚ್.20ರಂದು ಗಲ್ಲು ಶಿಕ್ಷೆ ಖಾಯಂ ಆಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ತನಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದ್ದು, ಅಲ್ಲದೇ ನಿರ್ಭಯಾ ಅತ್ಯಾಚಾರಿಗಳ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಕ್ತಾಯವಾಗಿದ್ದು, ಇನ್ನು ಯಾವುದೇ ಹೊಸ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.










