ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಮನೆ ಸೆಕ್ಯೂರಿಟಿ ಗಾರ್ಡ್ ಬಂಧನ…

86
firstsuddi

ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್ ನನ್ನು ಅರೆಸ್ಟ್ ಮಾಡಲಾಗಿದೆ.

ಮನೆಗೆ ನುಗ್ಗಿ ಹಲ್ಲೆ ನಡೆಸಲು ಪ್ರಚೋದನೆ ಮತ್ತು ಸಹಾಯದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸೆಕ್ಯೂರಿಟಿ ಬಾಲಾಜಿಯನ್ನ ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಎಫ್ಐಆರ್ ದಾಖಲಾದರೂ ನಿರ್ಮಾಪಕನ ಮಗ, ಪತ್ನಿ ಹಾಗೂ ಬೌನ್ಸರ್ ಗಳು ನಾಪತ್ತೆಯಾಗಿದ್ದಾರೆ. ಹೀಗಾಗಿ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಸೌಂದರ್ಯ ಜಗದೀಶ್ ಪತ್ನಿ ರೇಖಾ ಜಗದೀಶ್, ಅಪ್ಪುಪಪ್ಪು ಖ್ಯಾತಿಯ ಸ್ನೇಹಿತ್ ಮತ್ತು ಬೌನ್ಸರ್‌ಗಳು ಮಂಜುಳ ಪುರುಷೋತ್ತಮ್ ಅವರ ಮನೆಯ ಮಹಿಳಾ ಕೆಲಸಗಾರರ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದ ಕುರಿತಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.