ನೆಲಮಂಗಲ : ಭೀಕರ ಸರಣಿ ಅಪಘಾತ…

74
firstsuddi

ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟಿ.ಬೇಗೂರು ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ.

ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲಾರಿಯೊಂದು ಬ್ರೇಕ್ ಹಾಕಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಎರಡು ಬಸ್, ಎರಡು ಕಾರು, ಎರಡು ಲಾರಿ ಮತ್ತು ಒಂದು ಜೀಪ್ ಕೂಡ ಅಪಘಾತಕ್ಕೆ ಒಳಗಾಗಿವೆ. ಅಪಘಾತದಲ್ಲಿ 9 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಬಸ್ ಚಾಲಕನೊಬ್ಬ ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.