ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ!

101
firstsuddi

ಕಲಬುರಗಿ : ಪಿಯುಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕು ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ ನಲ್ಲಿ ನಡೆದಿದೆ.

ಗುರುಚರಣ್ ಉಡುಪ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಉಡುಪಿಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಎಂದು ತಿಳಿದು ಬಂದಿದೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನಗೆ ಆನ್ ಲೈನ್ ಕ್ಲಾಸ್ ಇದೆ, ಯಾರೂ ಡಿಸ್ಟರ್ಬ್ ಮಾಡಬೇಡಿ ಎಂದು ಗುರುಚರಣ್ ರೂಮ್ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಎರಡು ಗಂಟೆಯಾದರೂ ಆತ ಹೊರ ಬರದ ಕಾರಣ ಪೋಷಕರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಇದರಿಂದ ಗಾಬರಿಗೊಂಡು ಕೋಣೆಯ ಬಾಗಿಲು ಒಡೆದು ನೋಡಿದಾಗ ಗುರುಚರಣ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ.

ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೇ ಈಗಾಗಲೇ ಅಂತ್ಯಕ್ರಿಯೆ ನಡೆದಿದೆ. ಪೋಷಕರು ಠಾಣೆಗೆ ಯಾವುದೇ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.

ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.