ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ…

77
firstsuddi

ಹೈದರಾಬಾದ್ : ಭಾರತೀಯ ಜನತಾ ಪಕ್ಷದ ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಿನ್ನೆ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಜ್ಞಾನೇಂದ್ರ ಪ್ರಸಾದ್ ಅವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಅವರು ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್ ಹೌಸ್ ನಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.