ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟು ಶವ ಪತ್ತೆ…

62
firstsuddi

ಬೆಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ಯುವ ದೇಹದಾರ್ಢ್ಯ ಪಟು ಶವ ಪತ್ತೆಯಾಗಿದೆ.

ಬೆಂಗಳೂರಿನ ಕೆ.ಆರ್.ಪುರ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಡಿ ಫಾರ್ಮಾ ಓದುತ್ತಿದ್ದ ಶ್ರೀನಾಥ್, ವ್ಯಾಸಂಗ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಶ್ರೀನಾಥ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ನಿವಾಸಿ ಎಂದು ತಿಳಿದು ಬಂದಿದೆ.

ಶ್ರೀನಾಥ್ ಪೋಷಕರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.