ಬೆಂಗಳೂರು : ನೇಣು ಬಿಗಿದುಕೊಂಡು ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್.ಸಿ ಸುರೇಶ್ ಹಾಗೂ ಶೀಲಾ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ ಎಂದು ಗುರುತಿಸಲಾಗಿದೆ. ಶೀಲಾ ಅವರು ಕಂಟ್ರೋಲ್ ರೂಂನಲ್ಲಿ ಕಾನ್‍ಸ್ಟೇಬಲ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದು, ಹಾಗೂ ಹೆಚ್.ಸಿ ಸುರೇಶ್ ಅವರು ಬಾಗಲೂರು ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸುರೇಶ್ ಅವರು ನಿನ್ನೆ ಮೀಟಿಂಗ್ ಇದ್ದ ಹಿನ್ನೆಲೆ ರಾತ್ರಿವರೆಗೂ ಕಚೇರಿಯಲ್ಲೆ ಇದ್ದರು. ಬಳಿಕ ಮೀಟಿಂಗ್ ಮುಗಿಸಿಕೊಂಡು ಮನೆಗೆ ತೆರಳಿದ್ದಾರೆ. ಆದರೆ ಬೆಳಗ್ಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದು ಬಂದಿದ್ದು, ಮದುವೆಯಾಗಿ 10 ವರ್ಷ ಕಳೆದರೂ ಮಕ್ಕಳಾಗದ ಕಾರಣ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










