ಬೆಂಗಳೂರು: ಮಹಿಳಾ ಡಿವೈಎಸ್ಪಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿ. ಲಕ್ಷ್ಮೀ(33) ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಎಂದು ಗುರುತಿಸಲಾಗಿದೆ. 2014 ರ ಬ್ಯಾಚ್ ಅಧಿಕಾರಿಯಾಗಿದ್ದ ವಿ. ಲಕ್ಷ್ಮೀ ಅವರು 2017ರಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ನೇಮಕಗೊಂಡಿದ್ದರು. 2012ರಂದು ನವೀನ್ ಅವರನ್ನು ಪ್ರೀತಿಸಿ ವಿವಾಹವಾದ ಲಕ್ಷ್ಮೀ ಅವರು ಕೋಣನಕುಂಟೆಯಲ್ಲಿ ವಾಸವಾಗಿದ್ದು, ಇಬ್ಬರು ದಂಪತಿಗಳು ನಾಗರಬಾವಿಯಲ್ಲಿರುವ ತನ್ನ ಸ್ನೇಹಿತೆಯ ಅಪಾರ್ಟ್ಮೆಂಟ್ಗೆ ತೆರಳಿದ್ದು. ಬಳಿಕ ಸ್ನೇಹಿತೆಯ ಮನೆಯಲ್ಲಿ ಪಾರ್ಟಿ ಮಾಡಿ ರೂಮ್ಗೆ ತೆರಳಿ ಲಕ್ಷ್ಮೀ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನವೀನ್ ಹಾಗೂ ಅಧಿಕಾರಿ ಲಕ್ಷ್ಮೀ ಅವರ ದಾಂಪತ್ಯ ಜೀವನ ಸರಿ ಇರಲಿಲ್ಲ ಎನ್ನಲಾಗಿದ್ದು, ಇದೇ ಕಾರಣದಿಂದ ಲಕ್ಷ್ಮೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










