ಬೆಂಗಳೂರು : ನೇಣು ಬಿಗಿದುಕೊಂಡು ನವವಿವಾಹಿತೆ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉತ್ತರ ತಾಲ್ಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ನೇತ್ರಾ (27) ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನೇತ್ರಾ ಪೀಣ್ಯ ಸಂಚಾರಿ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಅವರನ್ನು ಮದುವೆಯಾಗಿದ್ದರು. ಮೂಲತಃ ತುಮಕೂರು ಜಿಲ್ಲೆಯವರಾದ ಇಬ್ಬರೂ ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದರು.
ಮೇಲ್ನೋಟಕ್ಕೆ ಅಡುಗೆ ಮಾಡುವ ವಿಚಾರಕ್ಕೆ ನಡುವೆ ಗಲಾಟೆ ನಡೆದು ನೇತ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










