ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್​ಟೇಬಲ್.

55
firstsuddi

ಹುಬ್ಬಳ್ಳಿ: ಪೊಲೀಸ್ ಕಾನ್ಸ್​ಟೇಬಲ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ ರುದ್ರಾಪೂರ(26) ಮೃತ ರ್ದುದೈವಿ. ಇವರು ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಾಸದ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇನ್ನೂ ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.