ರಾಹುಲ್‍ಗೆ ತಪ್ಪದ ಸಂಕಷ್ಟ – ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್.

69
firstsuddi

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ರಾಹುಲ್ ಗಾಂಧಿ ಅವರನ್ನು 4 ದಿನಗಳಲ್ಲಿ ಸುಮಾರು 40 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು. ಬಳಿಕ ಇಂದು ಮತ್ತೆ ವಿಚಾರಣೆಗಾಗಿ ಹಾಜರಾಗಲು ಇಡಿ ತಿಳಿಸಿದೆ. ಇಂದು ರಾಹುಲ್ ಗಾಂಧಿ ವಿಚಾರಣೆ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಯ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನೂ ಕೋವಿಡ್ ಸೋಂಕಿನಿಂದಾಗಿ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನಿನ್ನೆ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅಲ್ಲದೆ ವೈದ್ಯರು ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಈಗಾಗಲೇ ಸಮನ್ಸ್ ಜಾರಿಗೊಳಿಸಿದೆ. ಆದರೆ ವೈದ್ಯರು ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿರುವುದರಿಂದ ಇಡಿ ಮುಂದೆ ವಿಚಾರಣೆಗೆ ಹಾಜರಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.