ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ ಗಾಂಧಿಗೆ ಇಡಿ ಹೊಸ ಸಮನ್ಸ್.

65
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ನೀಡಿದೆ. ಜುಲೈ 21ರಂದು ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ.

ಈ ಹಿಂದೆ ಜೂನ್ 8 ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಅವರಿಗೆ ಇಡಿ ನೋಟಿಸ್ ನೀಡಿತ್ತು. ಅವರಿಗೆ ಕೋವಿಡ್ ಕಾಣಿಸಿಕೊಂಡಿದ್ದ ಕಾರಣ ಜೂನ್ 23 ರಂದು ಹಾಜರಾಗುವಂತೆ ಹೊಸ ಸಮನ್ಸ್ ನೀಡಿತ್ತು. ಆದರೆ, ವೈದ್ಯರು ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸೋನಿಯಾ ಇನ್ನಷ್ಟು ಸಮಯ ಕೋರಿದ್ದರು. ಇದೀಗ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.