ನ್ಯಾಷನಲ್ ಹೆರಾಲ್ಡ್ ಪ್ರಕರಣ : ಜು.25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೋನಿಯಾಗೆ ಇಡಿ ಸೂಚನೆ…

47
firstsuddi

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜುಲೈ 25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.

ಸೋನಿಯಾ ಗಾಂಧಿ ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಝೆಡ್ ಪ್ಲಸ್ ಭದ್ರತೆಯೊಂದಿಗೆ ಮಧ್ಯ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯ ವಿದ್ಯುತ್ ಲೇನ್ ನಲ್ಲಿರುವ ಫೆಡರಲ್ ತನಿಖಾ ಸಂಸ್ಥೆಯ ಪ್ರಧಾನ ಕಚೇರಿಗೆ ಆಗಮಿಸಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ ನೀಡಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಕಚೇರಿಯಿಂದ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹೀಗಾಗಿ, ಇಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರನ್ನು ಸುಮಾರು 3 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಜುಲೈ 25ರಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ದಾರೆ.