ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಂಡ ಪ್ರಕಟ – ಅಜಿಂಕ್ಯ ರಹಾನೆ ತಂಡದ ನಾಯಕ…

112
firstsuddi

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.

ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್.ರಾಹುಲ್, ಮಯಂಕ್ ಅಗರವಾಲ್, ಚೇತೇಶ್ವರ್ ಪೂಜಾರ (ಉಪ ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೆ.ಎಸ್.ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನವೆಂಬರ್ 25ರಂದು ಆರಂಭವಾಗಲಿದೆ. ಇನ್ನು ಎರಡನೇ ಪಂದ್ಯ ಡಿಸೆಂಬರ್ 3ರಂದು ಮುಂಬೈನಲ್ಲಿ ನಡೆಯಲಿದೆ.

ವಿರಾಟ್ ಕೊಹ್ಲಿ ಅವರು ಎರಡನೇ ಟೆಸ್ಟ್ ಗೆ ತಂಡ ಸೇರಿಕೊಳ್ಳುತ್ತಿರುವ ಕಾರಣ ಮೊದಲ ಟೆಸ್ಟ್ ಅನ್ನು ಅಜಿಂಕ್ಯಾ ರಹಾನೆ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಚೇತೇಶ್ವರ್ ಪೂಜಾರ ಅವರಿಗೆ ಉಪ ನಾಯಕನ ಪಟ್ಟ ನೀಡಲಾಗಿದೆ. ಈ ನುಡುವೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.