ಪಂಚಭೂತಗಳಲ್ಲಿ ಲೀನಳಾದ ಪ್ರತಿಭಾನ್ವಿತ ಬಾಲಕಿ ಸಮನ್ವಿ.

83
firstsuddi

ಬೆಂಗಳೂರು : ರಸ್ತೆ ಅಪಘಾತದಲ್ಲಿ ಸಾವಿಗೀಡಾದ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಅಂತ್ಯಕ್ರಿಯೆ ನಗರದ ಬನಶಂಕರಿ ಚಿತಾಗಾರದಲ್ಲಿ ನಡೆಯಿತು.

ಇಂದು ಬೆಳಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಸಮನ್ವಿ ಮೃತದೇಹವನ್ನು ಲಿಬರ್ಟಿ ಅಪಾರ್ಟ್ ಮೆಂಟ್ ಗೆ ತರಲಾಗಿತ್ತು. ಆದರೆ ಲಿಬರ್ಟ್ ಅಪಾರ್ಟ್ ಮೆಂಟ್ ನಲ್ಲಿ 20 ಮಂದಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಒಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಅಪಾರ್ಟ್ ಮೆಂಟ್ ಪ್ರವೇಶ ದ್ವಾರದ ಬಳಿಯೇ ಸಮನ್ವಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಬಣಜಿಗ ಸಂಪ್ರದಾಯದಂತೆ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ಅಂತ್ಯಸಂಸ್ಕಾರದಲ್ಲಿ ಕುಟುಂಬದವರು, ಕಿರುತೆರೆ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಇತ್ತ ಸಮನ್ವಿ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.