ನವದೆಹಲಿ : ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ನಿಗಧಿಯಾಗಲಿದೆ. ಉತ್ತರ ಪ್ರದೇಶ, ಗೋವಾ, ಪಂಜಾಬ್, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಮಧ್ಯಾಹ್ನ 3:30 ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಲಿದೆ.
ಚುನಾವಣಾ ಆಯೋಗವು ಗುರುವಾರ ಕೇಂದ್ರ ಆರೋಗ್ಯ ಮತ್ತು ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಕೋವಿಡ್ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ್ದು, ವ್ಯಾಕ್ಸಿನೇಷನ್ ಹೆಚ್ಚಿಸುವ ಮತ್ತು ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಚುನಾವಣೆ ನಡೆಸಲು ಸಾಧ್ಯವಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಆಯೋಗ ದಿನಾಂಕ ಪ್ರಕಟಿಸಲು ತಿರ್ಮಾನಿಸಿದೆ.










