ಪಂಚರಾಜ್ಯಗಳಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲು – ಇವಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು.

80
firstsuddi

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇವಿಎಂ(ವಿದ್ಯುನ್ಮಾನ ಮತ ಯಂತ್ರ)ಗಳ ಅಸಮರ್ಪಕ ಕಾರ್ಯ ನಿರ್ವಹಣೆಯೇ ಪಕ್ಷದ ಸೋಲಿಗೆ ಕಾರಣ ಎಂದು ಆರೋಪಿಸಿ ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ನ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್ ಗಿಲ್ ಅವರು, ಪಕ್ಷದ ಅಂತಃಕಲಹ, ಅಶಿಸ್ತು, ಟಿಕೆಟ್ ಹಂಚಿಕೆಯಲ್ಲಾದ ತಪ್ಪು ನಿರ್ಧಾರ, ಕಾರ್ಮಿಕರ ನಿರಾಶೆ ಮತ್ತು ನಾಯಕರ ದುರಹಂಕಾರವೇ ಪಂಜಾಬ್ ನಲ್ಲಿ ಕಾಂಗ್ರೆಸ್ ಸೋಲುವಂತೆ ಮಾಡಿದೆ ಎಂದಿದ್ದಾರೆ.