ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ: ವಾಪಸ್ ಕಳುಹಿಸಿದ ರಾಜ್ಯಪಾಲರು.

40

ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು 3 ಮಸೂದೆಗಳಿಗೆ ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರಿಗೆ, ಮುಖ್ಯಮಂತ್ರಿಗಳಿಗೆ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.
ವಾಪಸ್ ಕಳುಹಿಸಿ ಇತರ 2 ಮಸೂದೆಗಳೆಂದರೆ ಮೈಸೂರು ಪ್ರಾಧಿಕಾರ ಅಭಿವೃದ್ಧಿ ಮಸೂದೆ- 2024 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಣೆ ಮಸೂದೆ-2024ಕ್ಕೆ ಸಹಿ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.