ಪಂಜಾಬ್ ಚುನಾವಣೆ : ಎಎಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ…

97
firstsuddi

ನವದೆಹಲಿ : ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಪಂಜಾಬ್ ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನಾಗಿ ಸಂಗ್ರೂರ್ ಕ್ಷೇತ್ರದ ಸಂಸದ ಭಗವಂತ್ ಮಾನ್ ಅವರನ್ನು ಘೋಷಿಸಲಾಗಿದೆ. ಈ ಮೂಲಕ ಆಮ್ ಆದ್ಮಿ ಪಕ್ಷವೂ ಇತರ ಪಕ್ಷಗಳೊಂದಿಗೆ ಮುಂಚೂಣಿಯಲ್ಲಿರುವ ಪಕ್ಷವಾಗಿ ಗುರುತಿಸಿಕೊಂಡಿದೆ.

ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ಪಂಜಾಬ್ ನ ಚುನಾವಣೆಗೆ ಆಪ್ ಪಕ್ಷದಿಂದ ಸಿಎಂ ಅಭ್ಯರ್ಥಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವಾಟ್ಸಪ್, ಫೋನ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಶೇ. 93 ಕ್ಕಿಂತ ಹೆಚ್ಚು ಮತವನ್ನು ಭಗವಂತ್ ಮಾನ್ ಪಡೆದುಕೊಂಡಿದ್ದಾರೆ. ಈ ಹಿನ್ನಲೆ ಎಎಪಿ ಈ ನಿರ್ಧಾರವನ್ನು ಪ್ರಕಟಿಸಿದೆ.