ಪಂಜಾಬ್ ಸ್ಪೀಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ…

69
firstsuddi

ಚಂಡೀಗಢ: ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್, ಡೆಪ್ಯೂಟಿ ಸ್ಪೀಕರ್ ಜೈಕಿಶನ್ ರೋಡಿ, ಕ್ಯಾಬಿನೆಟ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್, ಮೀಟ್ ಹೇಯರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಪಂಜಾಬ್ ತರ್ನ್ ತರಣ್ ಜಿಲ್ಲಾ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

2020ರ ಆಗಸ್ಟ್ ನಲ್ಲಿ ಗಡಿ ಜಿಲ್ಲೆಗಳಾದ ಅಮೃತಸರ ಮತ್ತು ತರ್ನ್ ತರಣ್ ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ, ಅವರು ನ್ಯಾಯಾಯಲದ ಮುಂದೆ ಹಾಜರಾಗಿರಲಿಲ್ಲ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ನ್ಯಾಯಾಲಯ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ ಇಬ್ಬರು ಸಚಿವರು ಮತ್ತು ಶಾಸಕರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಆಮ್ ಆದ್ಮಿ ಪಕ್ಷದ ಕೆಲವು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧವೂ ವಾರೆಂಟ್ ಹೊರಡಿಸಲಾಗಿದೆ.