ಪಂಡಿತ್ ಜವಾಹರ್​ಲಾಲ್ ನೆಹರೂ ಜನ್ಮದಿನ – ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಸೋನಿಯಾ, ಖರ್ಗೆ

83
firstsuddi

ನವದೆಹಲಿ : ಇಂದು ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್​ಲಾಲ್ ನೆಹರೂ ಅವರ 133ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ದೆಹಲಿಯ ಶಾಂತಿವನಕ್ಕೆ ತೆರಳಿ ನೆಹರೂ ಸಮಾಧಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪುಷ್ಪ ನಮನ ಸಲ್ಲಿಸಿದರು.

ಇನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ನೆಹರೂ ಅವರಿಗೆ ಗೌರವ ಸೂಚಿಸಿದ್ದಾರೆ. ನಮ್ಮ ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಜಿ ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಇಂದು ನಾವು ಸ್ಮರಿಸತ್ತಿದ್ದೇವೆಂದು ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ನಿರತರಾಗಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮ್ಮ ಮುತ್ತಾತನನ್ನು ಸ್ಮರಿಸಿದ್ದು, ಅಪರೂಪದ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ ಮಾತೆ ಯಾರು?, ಭಾರತದ ಜನರು ಈ ವಿಶಾಲವಾದ ಭೂಮಿಯಲ್ಲಿ ಹೆಚ್ಚು-ಹೆಚ್ಚು ಹರಡಿದ್ದಾರೆ. ಇಲ್ಲಿ ಕೋಟಿ ಕೋಟಿ ಜನರೇ ಭಾರತದ ತಾಯಿ. ಪಂಡಿತ್ ನೆಹರೂ ಅವರ ಪ್ರಜಾಸತ್ತಾತ್ಮಕ, ಪ್ರಗತಿಪರ ಮತ್ತು ಜಾತ್ಯತೀತ ಮೌಲ್ಯಗಳನ್ನು ನನ್ನ ಹೃದಯದಲ್ಲಿ ಹೊತ್ತುಕೊಂಡು, ‘ಹಿಂದು ರತ್ನ’ವಾದ ಭಾರತಮಾತೆಯನ್ನು ರಕ್ಷಿಸಲು ನಾನು ಸಂಕಲ್ಪ ಹೊತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.