ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ…

59
firstsuddi

ಬೆಂಗಳೂರು: ಆರ್‌ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ಕ್ರೀಸ್‌ಗೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ.

ನಿನ್ನೆ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಚಕ ಐಪಿಎಲ್ ಪಂದ್ಯ ನಡೆಯುತ್ತಿದೆ. ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಹೈ ಸೆಕ್ಯೂರಿಟಿ ಮಧ್ಯೆಯೂ ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲು ಹಿಡಿದು ಹುಚ್ಚಾಟ ನಡೆಸಿದ್ದಾನೆ.

ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ರೂಲ್ಸ್‌ಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದಾನೆ. ಘಟನೆ ನಡೆದ ಕೂಡಲೇ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ಯುವಕನ ವಿಚಾರಣೆ ಮಾಡಲಾಗುತ್ತಿದೆ.