ಪಠ್ಯದಿಂದ ಟಿಪ್ಪು ಇತಿಹಾಸ ಕೈಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು : ಬಿ.ಸಿ.ನಾಗೇಶ್.

54
firstsuddi

ಬೆಂಗಳೂರು : ಟಿಪ್ಪು ಸುಲ್ತಾನ್ ವಿಚಾರವನ್ನು ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಪಠ್ಯದಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಈಗ ಸರಿಪಡಿಸುವ ಕೆಲಸ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ. ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅವುಗಳನ್ನು ಪರಿಚರಿಸಲು ಪ್ರಯತ್ನ ಮಾಡಿದ್ದೇವೆ. ಮಕ್ಕಳು ಓದಲೇಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದರು.

ದುಪಟ್ಟಾ ಧರಿಸಲು ಅನುಮತಿ ನೀಡುವ ಸಿದ್ದರಾಮಯ್ಯ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ನಾಗೇಶ್, ಸಿದ್ದರಾಮಯ್ಯ ಒಬ್ಬ ಸಿಎಂ ಆಗಿ, ಲಾಯರ್ ಆಗಿ ಬೆಳೆದಂತವರು. ಅವರು ಯಾವುದೋ ಒತ್ತಡಕ್ಕೆ ಮಣಿದು ಆ ಆಗ್ರಹ ಮಾಡಿದ್ದಾರೆ ಎಂದು ಟೀಕಿಸಿದರು.