ಪತಿ, ಅತ್ತೆ-ಮಾವನ ಕಿರುಕುಳ: ಮನನೊಂದು ಗೃಹಿಣಿ ಆತ್ಮಹತ್ಯೆ…

47
firstsuddi

ಮೈಸೂರು: ಪತಿ ಮತ್ತು ಆತನ ಮನೆಯವರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.

ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು.

ಕಿರುಕುಳ ತಾಳಲಾರದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.

ಈ ಕುರಿತು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.