ಪತಿಯ ಕಿರುಕುಳ ತಾಳಲಾರದೇ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ…

53
firstsuddi

ಚಿತ್ರದುರ್ಗ: ಪತಿಯ ಕಿರುಕುಳ ತಾಳಲಾರದೇ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.

ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತ ದುರ್ದೈವಿಗಳು. ಕಳೆದ 8ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾಳನ್ನು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆಯಾಗಿದ್ದು, ಪತ್ನಿ ಮೇಲೆ ಅನುಮಾನ ಪಡುತ್ತಿದ್ದನು. ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ಟಾರ್ಚರ್ ನೀಡುತ್ತಾ ಹಲ್ಲೆ ನಡೆಸುತ್ತಿದ್ದನಂತೆ.

ಈ ಕಿರುಕುಳದಿಂದ ಮನನೊಂದ ಅರ್ಪಿತಾ ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರ್ಪಿತಾ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೊದಲ್ಲಿ ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್ ನ ಮನಕಲಕುವ ಸೆಲ್ಫಿ ವಿಡಿಯೋ ವೈರಲ್ ಆಗಿದೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.