ಪತ್ನಿಯೊಂದಿಗೆ ಅನೈತಿಕ ಸಂಬಂಧ; ತಮ್ಮನನ್ನೇ ಹಾರೆಯಿಂದ ಕೊಚ್ಚಿ ಹತ್ಯೆ ಮಾಡಿದ ಅಣ್ಣ…

350
firstsuddi

ಮಂಡ್ಯ : ತನ್ನ ಪತ್ನಿಯೊಂದಿಗೆ ತಮ್ಮ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಅಣ್ಣ ತಮ್ಮನನ್ನೇ ಹಾರೆಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ(40) ಕೊಲೆಯಾದ ವ್ಯಕ್ತಿ ಎನ್ನಲಾಗಿದ್ದು, ನಿನ್ನೆ ರಾತ್ರಿ ಇಬ್ಬರ ನಡುವೆ ಇದೇ ವಿಚಾರವಾಗಿ ಜಗಳವಾಗಿದ್ದು, ಬಳಿಕ ತಮ್ಮ ಮಲಗಿದ್ದ ವೇಳೆ ಅಣ್ಣ ಮಂಜುನಾಥ್ ಎಂಬುವವರು ಹಾರೆಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.