ಪರಿಷತ್​ನ ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ…

67
firstsuddi

ಬೆಂಗಳೂರು : ಜೂನ್ 13ರಂದು ನಡೆದಿದ್ದ ವಿಧಾನ ಪರಿಷತ್ ನ ಎರಡು ಶಿಕ್ಷಕ, ಎರಡು ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮೂರು ಪಕ್ಷಗಳಿಂದ ಒಟ್ಟು 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ಪ್ರಕಾಶ್ ಹುಕ್ಕೇರಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿದ್ದಾರೆ. ಮತಪತ್ರಗಳ ಎಣಿಕೆ ಜೊತೆ ಪ್ರಾಶಸ್ತ್ರ ಮತಗಳ ಎಣಿಕೆ ನಡೆಯೋದರಿಂದ ಫಲಿತಾಂಶ ಹೊರಬೀಳಲು ಹೆಚ್ಚಿನ ಸಮಯ ಪಡೆಯುವ ಸಾಧ್ಯತೆಯಿದೆ.

ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಿದ್ದು, ಎಣಿಕೆ ಕೇಂದ್ರಗಳ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ ಎಣಿಕೆಗಾಗಿ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿ ಆಗಿದೆ.