ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ…

66
firstsuddi

ಶಿವಮೊಗ್ಗ : ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಗರದ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ.

ಐವರು ವಿದ್ಯಾರ್ಥಿಗಳ ಮೇಲೆ ಹಾಗೂ 12 ಮಂದಿ ಪೋಷಕರ ಮೇಲೆ ಜೇನು ಹುಳಗಳು ದಾಳಿ ನಡೆಸಿವೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಕೇಂದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ, ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದು, ಪರೀಕ್ಷೆ ಬರೆಯುತ್ತಿದ್ದಾರೆ. ಪೋಷಕರು ಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಂಜೀವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ಮಾಡಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅವಧಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ನಗರದ ಕಸ್ತೂರಬಾ ಬಾಲಕಿಯರ ಪ್ರೌಢಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ಹಿಜಾಬ್ ತೆಗೆಯದೆ ಪರೀಕ್ಷೆ ಬರೆಯುವುದಿಲ್ಲ ಎಂದು ವಾಪಸ್ ಹೋಗಿ ಪುನಾಃ ಬಂದು ಪರೀಕ್ಷೆಗೆ ಹಾಜರಾಗಿದ್ದಾರೆ.