ಕೋಲ್ಕತ್ತಾ/ಗುವಾಹಟಿ : ಪಶ್ಚಿಮ ಬಂಗಾಳ ಹಾಗೂ ಅಸ್ಸೋಂನಲ್ಲಿ 2ನೇ ಹಂತದ ಮತದಾನ ಆರಂಭಗೊಂಡಿದ್ದು, ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಪಶ್ಚಿಮ ಬಂಗಾಳದಲ್ಲಿ 30 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, 191 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 8,332 ಮತಗಟ್ಟೆಗಳಲ್ಲಿ ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ದೇಶದಾದ್ಯಂತ ಗಮನ ಸೆಳೆದಿರುವ ನಂದಿ ಗ್ರಾಮದಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿಯ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದು, ಭಾರೀ ಫೈಟ್ ಮೂಡಿಸುವ ಕ್ಷೇತ್ರವಾಗಿದೆ.
ಇನ್ನು ಅಸ್ಸೋಂನಲ್ಲೂ ಕೂಡ 2ನೇ ಹಂತದ ಮತದಾನ ನಡೆಯಲಿದ್ದು, 39 ಕ್ಷೇತ್ರಗಳಲ್ಲಿ ಮತಚಲಾವಣೆ ಆರಂಭವಾಗಿದೆ. ಒಟ್ಟೂ 345 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 13 ಜಿಲ್ಲೆಗಳ 39 ಕ್ಷೇತ್ರಗಳಲ್ಲಿ ಒಟ್ಟು 10,592 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಅನುಸರಣೆಯನ್ನು ಕಡ್ಡಾಯಗೊಳಿಸಲಾಗಿದೆ.










