ಪಾಕಿಸ್ತಾನದಲ್ಲಿ ಹಿಂದೂ ವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು…

65
firstsuddi

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಈ ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ 2ನೇ ಪ್ರಕರಣ ಇದಾಗಿದೆ.

ಕರಾಚಿ ಮುನ್ಸಿಪಲ್ ಕಾರ್ಪೊರೇಶನ್ ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ. ಬೀರ್ಬಲ್ ಗೆನಾನಿ ಅವರನ್ನು ನಿನ್ನೆ ಲಿಯಾರಿ ಎಕ್ಸ್‌ಪ್ರೆಸ್‌ವೇ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದಾಳಿಯಲ್ಲಿ ಅವರ ಸಹಾಯಕ ಡಾ. ಕುರಾತ್-ಉಲ್-ಐನ್ ಗಾಯಗೊಂಡಿದ್ದಾರೆ.

ಇವರಿಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯವನ್ನಾಧರಿಸಿ ಇದು ಉದ್ದೇಶಪೂರ್ವಕ ಹತ್ಯೆ ಎಂದು ಶಂಕಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಹೈದರಾಬಾದ್ ನಲ್ಲಿ ವೈದ್ಯ ಧರಮ್ ದೇವ್ ರಾಥಿ ಅವರನ್ನು ತಮ್ಮ ಡ್ರೈವರ್ ಹತ್ಯೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ವೈದ್ಯ ತನ್ನ ಮನೆಯಲ್ಲಿದ್ದಾಗ ಚಾಲಕ ಚಾಕುವಿನಿಂದ ಕತ್ತು ಸೀಳಿ ಹತ್ಯೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.