ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ.
ಜಫರಾಲಿ ಖಾನ್ ಚೌಕ್ ನಲ್ಲಿ ಘಟನೆ ನಡೆದಿದೆ. ಇಮ್ರಾನ್ ಖಾನ್ ವಜೀರಾಬಾದ್ ನಲ್ಲಿ ಇಂದು ತೆರೆದ ವಾಹನದಲ್ಲಿ ರ‍್ಯಾಲಿ ನಡೆಸುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಖಾನ್ ಮೇಲೆ ದಾಳಿ ನಡೆಸಿದ್ದಾನೆ. ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ.
ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಸಹಾಯಕ ಸೇರಿದಂತೆ ನಾಲ್ವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಗುಂಡಿನ ದಾಳಿ ನಡೆದ ಬಳಿಕ ಇಮ್ರಾನ್ ಖಾನ್ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಘಟನೆಯ ಬಳಿಕ ಬಂದೂಕುಧಾರಿಯನ್ನು ಬಂಧಿಸಲಾಗಿದೆ.










