ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ, ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ…

170
firstsuddi

ಶ್ರೀನಗರ : ಗಡಿಯಲ್ಲಿ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‍ನಲ್ಲಿ ತಡರಾತ್ರಿ 12:30ರ ಸುಮಾರಿಗೆ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಹವಾಲ್ದರ್ ಎಸ್, ಗುರುಂಗ್ ಅವರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.