ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ, ಗುಂಡಿನ ದಾಳಿಗೆ 10ದಿನದ ಮಗು ಸಾವು…

269
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಎಲ್‍ಒಸಿ ಬಳಿ ಇರುವ ಕೃಷ್ಣ ಕಣಿವೆ, ಮಂಕೋಟ್ ಹಾಗೂ ಮೆಂದರ್ ನಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 10ದಿನದ ಮಗು ಮೃತಪಟ್ಟಿದ್ದು, ಇಬ್ಬರು ಸಾರ್ವಜನಿಕರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆಯು ಭಾರತೀಯ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಪೂಂಚ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗುಂಡೇಟು ತಗುಲಿ ತೀವ್ರ ಗಾಯದಿಂದ ಬಳಲುತ್ತಿದ್ದ 10ದಿನದ ಮಗು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇನ್ನು ಇಬ್ಬರು ಗಾಯಳುಗಳನ್ನು ಜಮ್ಮುವಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿದೆ.