ಪಾಟ್ನಾ : ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಆರಂಭಿಸಿದ ಏಮ್ಸ್…

87
firstsuddi

ಬಿಹಾರ : ಭಾರತ್ ಬಯೋಟೆಕ್ ತಯಾರಿಸಿದ ಕೋವಿಡ್-19 ಲಸಿಕೆಯಾದ ಕೋವಾಕ್ಸಿನ್ ನನ್ನು ಪಾಟ್ನಾದ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಮಕ್ಕಳ ಮೇಲೆ ಪ್ರಯೋಗವನ್ನು ಆರಂಭಿಸಿದೆ.

2ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ ನ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮೇ 11ರಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿತ್ತು.

ಭಾರತದಲ್ಲಿ ಜನವರಿ 16ರಂದು ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಕೊರೊನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ ಮಾರ್ಚ್ 1ರಿಂದ 65 ವರ್ಷ ಮೇಲ್ಪಟ್ಟವರಿಗೆ, ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೇ 1ರಿಂದ 18 ರಿಂದ 44 ವರ್ಷದವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ.