ಪಾದರಾಯನ ಪುರದಲ್ಲಿ ಹಲ್ಲೆ ನಡೆಸಿದ ಗಲಭೆಕೋರರ ಆಸ್ತಿ ಜಪ್ತಿ ಮಾಡಿ ಅವರಿಂದಲೇ ಆಗಿರುವ ನಷ್ಟವನ್ನು ವಸೂಲು ಮಾಡಬೇಕು : ಸಚಿವ ಸಿ.ಟಿ. ರವಿ.

217
firstsuddi

ಬೆಂಗಳೂರು : ನಗರದ ಪಾದರಾಯನ ಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗಲಭೆಕೋರರು ಹಾಗೂ ಇಂತಹ ದುಷ್ಕರ್ಮಿಗಳಿಗೆ ಪ್ರಚೋದನೆ ನೀಡಿದವರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ಗಲಭೆಕೋರರು ಆರೋಗ್ಯ ಸಿಬ್ಬಂದಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಅವರ ಮೇಲೆ ಯಾವುದೇ ರೀತಿಯ ಕನಿಕರ ತೋರಿಸಬಾರದು. ಬದಲಾಗಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಈ ಹಿಂದೆ ಸಾಧಿಕ್ ಪಾಳದಲ್ಲೂ ಇಂತಹ ಗಲಭೆ ನಡೆದಿತ್ತು. ಪಾದರಾಯನಪುರದ ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು. ಈ ಮೂಲಕ ಗಲಭೆ ವೇಲೆ ಆಗಿರುವ ನಷ್ಟವನ್ನು ವಸೂಲು ಮಾಡಬೇಕು. ಅಷ್ಟೇ ಅಲ್ಲದೇ ದುಷ್ಕರ್ಮಿಗಳಿಗೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.