ಪಾವಗಡ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಶ್ರೀರಾಮುಲು.

67
firstsuddi

ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಸಮೀಪ ನಡೆದ ಖಾಸಗಿ ಬಸ್ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ಶ್ರೀರಾಮುಲು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಶ್ರೀರಾಮುಲು ತಿಳಿಸಿದ್ದಾರೆ.

ಇನ್ನೂ ಅಪಘಾತದ ಕುರಿತಾಗಿ ಆರ್.ಟಿ.ಓ ಅಧಿಕಾರಿಗಳಿಂದ ಮಾಹಿತಿ ಪಡೆದ ಶ್ರೀರಾಮುಲು ಬಳಿಕ ಪಾವಗಡದ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.